ಮಹಾಲಕ್ಷ್ಮಿಯ ಹಾಡು
ಶ್ರೀ ಮಹಾಲಕುಮಿ ದೇವಿಯೆ,
ಕೋಮಲಾಂಗಿಯೆ
ಸಾಮಗಾಯನ ಪ್ರಿಯಳೇ ||ಪ||
ಹೇಮಗರ್ಭ ಕಾಮಾರಿ ಶಕ್ರಸುರ
ಸ್ತೋಮ ವಂದಿತಳೆ
ಸೋಮ ಸೋದರಿಯೇ ||ಅ.ಪ.||
ಬಟ್ಟುಕುಂಕುಮ ನೊಸಲೋಳೆ ಮುತ್ತಿನ ಹೊಸ
ಕಟ್ಟಾಣಿ ತ್ರಿವಳಿ ಕೊರಳೋಳೆ
ಇಟ್ಟ ಪೊನ್ನೋಲೆ ಕಿವಿಯೋಳೆ ಪವಳದ ಕೈಯ
ಕಟ್ಟ ಕಂಕಣ ಕೈಬಳೆ
ತೊಟ್ಟ ಕುಪ್ಪಸ ಬಿಗಿದುಟ್ಟ ಪೀತಾಂಬರ
ಘಟ್ಟಿ ವಡ್ಯಾಣ ಕಾಲಂದಿಗೆ ರುಳಿಗೆಜ್ಜೆ
ಬೆಟ್ಟಿಲಿ ಪೊಳೆವುದು ವೆಂಟಿಕೆ ಕಿರುಪಿಲ್ಲಿ
ಇಟ್ಟು ಶೋಭಿಸುವ ಅಷ್ಟಸಂಪನ್ನೆ ||೧||
ಸಕಲ ಶುಭಭರಿತಳೆ ಏಕೋದೇವಿಯೆ
ವಾಕುಲಾಲಿಸಿ ನೀ ಕೇಳೆ
ನೋತನಿಯನ್ನ ಮಹಲೀಲೆ ಕೊಂಡಾಡುವಂಥ
ಏಕಮನವ ಕೊಡು ಶೀಲೆ
ಬೇಕು ನಿನ್ನ ಪತಿ ಪಾದಾಬ್ಜವ
ಏಕಾಂತದಿ ಪೂಜಿಪರ ಸಂಗವ ಕೊಡು
ಲೋಕದ ಜನರಿಗೆ ನಾ ಕರವೊಡ್ಡದಂತೆ
ನೀ ಕರುಣಿಸಿ ಕಾಯೆ ರಾಕೇಂದುವದನೆ ||೨||
ಮಂದರೋದ್ಧನರಸಿಯೆ ಇಂದಿರೆಯೆನ್ನ
ಕುಂದು ದೋಷಗಳಳಿಯೆ
ಅಂದ ಸೌಭಾಗ್ಯದ ಸಿರಿಯೆ ತಾಯೆ
ನಾ ನಿನ್ನಕಂದನು ಮುಂದಕ್ಕೆ ಕರೆಯೆ
ಸಿಂಧುಶಯನ ಸಿರಿ ವಿಜಯವಿಠ್ಠಲರೆಯ
ಎಂದೆಂದಿಗೊ ಮನದಿಂದಗಲದೆ
ಆನಂದದಿಂದಲಿ ಬಂದು ಮುಂದೆ ಕುಣಿಯುವಂತೆ
ವಂದಿಸಿ ಪೇಳಮ್ಮ ಸಿಂಧುಸುತೆಳೆ||೩||
0 ಕಾಮೆಂಟ್‌ಗಳು