ನೀನೆ ಪರಮ ಪಾವನಿ ನಿರಂಜನಿ - Neene Parama Pavani Niranjani

|| ದೇವಿ ಸ್ತುತಿ ||


ನೀನೆ ಪರಮ ಪಾವನಿ ನಿರಂಜನಿ। । ಪ ||


ಆದಿ ನಾರಾಯಣಿ ಸಾಧು ಜನ ವಂದಿನಿ

ಸದಾನಂದ ರೂಪಿಣಿ ಸದ್ಗತಿ ಸುಖ ದಾಯಿನಿ ||೧||


ಲಕ್ಷುಮಿ ರೂಪಿಣಿ ಸಾಕ್ಷಾತ್ಮರಿಣಿ

ರಕ್ಷ ರಕ್ಷಾತ್ಮಿಣಿ ಅಕ್ಷಯ ಪದ ದಾಯಿನಿ   ||೨||


ಅನಾಥ ರಕ್ಷಿಣಿ ದೀನೋದ್ಧಾರಿಣಿ

ಅನಂತಾನಂತ ಗುಣಿ ಮುನಿಜನ ಭೂಷಣಿ || ೩||


ದಾರಿದ್ರ ಭಂಜನಿ ದುರಿತ ವಿಧ್ವಂಸಿನಿ

ಪರಮ ಸಂಜೀವಿನಿ ಸುರ ಮುನಿ ರಂಜನಿ ||೪||


ಸ್ವಾಮಿ ಶ್ರೀ ಗುರುವಿನಿ ಬ್ರಹ್ಮಾನಂದ ರೂಪಿಣಿ

ಮಹಿಪತಿ ಕುಲ ಸ್ವಾಮಿನಿ ಪರಮ ಪಾವನಿ ||೫||

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು