ರಾಗ : ಹಿಂದೋಳ
ತಾಳ : ಆದಿ
![]() |
kannadabhajanlyrics.com |
ಶ್ರೀ ಮಹಾಲಕ್ಷ್ಮಿಯ ಅಲಂಕರಿಸಿ ಕರೆವರು
ಶ್ರೀ ಮಹಾಲಕ್ಷ್ಮಿಯ.............. || ಪ ||
ಕೇಶವ ನಿಮ್ಮ ನಾಮ ಮಾಂಗಲ್ಯಸೂತ್ರ ತಾಳಿ
ನಾರಾಯಣ ನಿಮ್ಮ ನಾಮ ತಾಳಿ ಪದಕವು
ಮಾಧವ ನಿಮ್ಮ ನಾಮ ಸುರಗಿ ಸಂಪಿಗೆ ಮೊಗ್ಗು
ಗೋವಿಂದ ನಿಮ್ಮ ನಾಮ ಗೋಧಿಯ ಸರವು ||೧||
ವಿಷ್ಣುವೆ ನಿಮ್ಮ ನಾಮ ರತ್ನ ಕುಂಡಲಿಗಳು
ಮಧುಸೂದನ ನಾಮ ಮಾಣಿಕ್ಯದ ಹರಳು
ತ್ರಿವಿಕ್ರಮ ನಿಮ್ಮ ನಾಮ ವಂಕಿ ನಾಗ ಮುರಿಗೆ
ವಾಮನ ನಿಮ್ಮ ನಾಮ ರತ್ನ ಪದಕವು || ೨ ||
ಶ್ರೀಧರ ನಿಮ್ಮ ನಾಮ ಒಳ್ಳೆ ಮುತ್ತಿನ ಹಾರ
ಹೃಷಿಕೇಶ ನಿಮ್ಮ ನಾಮ ಕಾಲಿಗೆ ಗೆಜ್ಜೆಯು
ಪದ್ಮನಾಭ ನಿಮ್ಮ ನಾಮ ಮುತ್ತಿನ ಅಡ್ಡಿಕೆಯು
ದಾಮೋದರ ನಿಮ್ಮ ನಾಮ ರತ್ನ ಪದಕವು || ೩ ||
ಸಂಕರ್ಷಣ ನಿಮ್ಮ ನಾಮ ವಂಕಿ ತೋಳಾಯಿತು
ವಾಸುದೇವ ನಿಮ್ಮ ನಾಮ ಒಲಿದ ಚೂ.....ಡಾ
ಪ್ರದ್ಯುಮ್ನ ನಿಮ್ಮ ನಾಮ ಹಸ್ತ ಕಂಕಣ ಬಳೆ
ಅನಿರುದ್ಧ ನಿಮ್ಮ ನಾಮ ಮುಕುರ ಬುಲಾಕು||೪||
ಪುರುಷೋತ್ತಮ ನಿಮ್ಮ ನಾಮ ಹೊಸ ಮುತ್ತಿನ ಮೂಗುತಿ
ಅಧೋಕ್ಷಜ ನಿಮ್ಮ ನಾಮ ಚಂದ್ರ ಸೂರ್ಯ
ನರಸಿಂಹ ನಿಮ್ಮ ನಮ ಚೌರಿ ರಾಗಟಿ ಗೊಂಡೆ
ಅಚ್ಚುತ ನಿಮ್ಮ ನಾಮ ಮುತ್ತಿನ ಬೊಟ್ಟು || ೫ ||
ಜನಾರ್ದನ ನಿಮ್ಮ ನಾಮ ಜರಿಯ ಪೀತಾಂಬರ
ಉಪೇಂದ್ರ ನಿಮ್ಮ ನಾಮ ಕಡಗ ಗೆಜ್ಜೆಯು
ಶ್ರೀಹರಿ ನಿಮ್ಮ ನಾಮ ಕಂಚು ವಂಕಿಯ ತುಳಸಿ
ಶ್ರೀ ಕೃಷ್ಣ ನಿಮ್ಮ ನಾಮ ನಡುವಿನ ವಡ್ಯಾಣವು||೬||
ಸರಸಿಜಾಕ್ಷ ನಿಮ್ಮ ನಾಮ ಅರಿಶಿನ ಎಣ್ಣೆ ಹಚ್ಚಿ
ಪಂಕಜಾಕ್ಷ ನಿಮ್ಮ ನಾಮ ಕುಂಕುಮ ಕಾಡಿಗೆಯು
ಪುರಂದರ ವಿಠಲ ನಿಮ್ಮ ನಾಮ ಸರ್ವಾಭರಣವು
ನಿಲುವು ಕನ್ನಡಿಯಲ್ಲಿ ಲಲನೆಯ ತೋರಿಸುತ್ತಾ ||೭||
0 ಕಾಮೆಂಟ್ಗಳು