ಏನು ಮರುಳಾದೆಮ್ಮ ಎಲೆ ರುಕ್ಮಿಣಿ ಹೀನಕುಲ ಗೊಲ್ಲ ಶ್ರೀ ಗೋಪಾಲಕೃಷ್ಣಗೆ - Enu Marulademma Ele Rukmini

|| ಕೃಷ್ಣ ಭಜನೆ ||



ಏನು ಮರುಳಾದೆಮ್ಮ ಎಲೆ ರುಕ್ಮಿಣಿ

ಹೀನಕುಲ ಗೊಲ್ಲ ಶ್ರೀ ಗೋಪಾಲಕೃಷ್ಣಗೆ 


ಹಾಸಿಕಿಲ್ಲದೆ ಹಾವಿನ ಮೇಲೆ ಒರಗಿದವ

ಹೇಸಿಕಿಲ್ಲದೆ ಕರಡಿಯ ಕೂಡಿದ

ಗ್ರಾಸಕಿಲ್ಲದೆ ತೊತ್ತಿನ ಮಗನ ಮನೆಲುಂಡ

ದೋಷಕಂಜದೆ ಮಾವನ ಶಿರವ ತರಿದವಗೆ 


ಕುಂಡಗೋಳಕರ ಮನೆ ಕುಲದೈವವೆನಿಸಿದಗೆ

ಮಂಡೆ ಬೋಳರ ಮನಕೆ ಮನದೈವವ

ಹಿಂಡು ಗೊಲ್ಲರ ಮನೆ ಹಿರಿಯನೆಂದೆನಿಸುವ

ಭಂಡಾಟದ ಗೊಲ್ಲ ಈ ಬಳಗದೊಳಗೆಲ್ಲ ||೧||


ಒಬ್ಬರಲ್ಲಿ ಹುಟ್ಟಿ ಒಬ್ಬರಲ್ಲಿ ಬೆಳೆದ

ಒಬ್ಬರಿಗೆ ಮಗನಲ್ಲ ಜಗದೊಳಗೆಲ್ಲ 

ಅಬ್ಬರದ ದೈವ ಶ್ರೀ ಪುರಂದರವಿಠ್ಠಲನ 

ಉಬ್ಬುಬ್ಬಿ ಮದುವ್ಯಾದೆ ಉತ್ಸಾಹದಿಂದ ||೨||


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು