|| ತುಳಸಿ ಹಾಡು ||
ಕಲ್ಯಾಣಂ ತುಳಸಿ ಕಲ್ಯಾಣಂ ||ಪ||
ಕಲ್ಯಾಣವೇ ನಮ್ಮ ಕೃಷ್ಣ ತುಳಸಿಗೆ
ಬಲ್ಲಿದ ಶ್ರೀ ವಾಸುದೇವನಿಗೆ ||ಅ.ಪ.||
ಅಂಗಳದೊಳಗೆಲ್ಲ ತುಳಸಿಯ ವನಮಾಡಿ।
ಶೃಂಗಾರವ ಮಾಡಿ ಶೀಘ್ರದಿಂದ
ಕಂಗಳ ಪಾಪವ ಪರಿಹರಿಸುವ ಮುದ್ದು
ರಂಗ ಬಂದಲ್ಲಿ ತಾ ನೆಲೆಸಿದನು ||೧||
ಮಿಂದು ಮಡಿಯನುಟ್ಟು ಸಂದೇಹವ ಬಿಟ್ಟು
ತಂದ ಶ್ರೀ ಗಂಧಾಕ್ಷತೆಗಳಿಂದ
ಸಿಂಧುಶಯನನ ವೃಂದಾವನದಿ ಪೂಜಿಸೆ
ಕುಂದದ ಭಾಗ್ಯವ ಕೊಡುತಿಹಳು||೨||
ಭಕ್ಷ್ಯ ಭೋಜ್ಯಂಗಳ ನೈವೇದ್ಯವನಿತ್ತು!
ಲಕ್ಷ ಬತ್ತಿಯ ದೀಪವ ಹಚ್ಚಿ
ಅಧೋಕ್ಷಜ ಸಹಿತ ವೃಂದವನ ಪೂಜಿಸೆ
ಸಾಕ್ಷಾತ್ ಮೋಕ್ಷವ ಕೊಡುತಿಹಳು||೩||
ಉತ್ಥಾನ ದ್ವಾದಶಿ ದಿವಸದಿಂದಲಿ ಕೃಷ್ಣ
ಉತ್ತಮ ತುಳಸಿಗೆ ವಿವಾಹವ
ಚಿತ್ತನಿರ್ಮಲರಾಗಿ ಮಾಡಿದವರಿಗೆ
ಉತ್ತಮ ಗತಿ ಈವ ಪುರಂದರ ವಿಠಲ||೪||
0 ಕಾಮೆಂಟ್‌ಗಳು