|| ಗೋವಿಂದ ಸ್ತುತಿ ||
ರಂಗನ ನೋಡಿರೆ ರಾಜಕುವರ ನರ
ಸಿಂಗ ದೇವ ನಮ್ಮ ದೇವಕಿ ಸುತನ ||ಪ||
ಹಮ್ಮಿನ ತಾಯಿತ ತೋಳ ಭಾಪುರಿಯೊ
ಘಮ್ಮನೆ ಘಲ್ಲೆಂಬ ಗೆಜ್ಜೆಯ ಧ್ವನಿಯೊ
ಸುಮ್ಮಹಿಮನ ಕಿವಿಯಲ್ಲಿ ಚೌಕುಲಿಯೊ
ತಿಮ್ಮರಾಯ ನಿಟ್ಟ ಸೊಬಗಿನ ಬಗೆಯೊ ||೧||
ಶುಕ್ರವಾರದ ಪೂಜೆಗೊಂಬವನ
ಸಕ್ಕರೆ ಪಾಲ್ ಮೊಸರು ಬೆಣ್ಣೆ ಮೆಲ್ಲುವನ
ಘಕ್ಕನೆ ಸುರರಿಗೆ ಅಮೃತವಿತ್ತವನ
ರಕ್ಕಸ ಕುಲವೈರಿ ರಾವಣಾಂತಕನ ||೨||
ಪಾಪವಿನಾಶಿನಿ ಸ್ನಾನವ ಮಾಡಿ
ಪಾಪಗಳೆಲ್ಲವು ಬೇಗಬಿಟ್ಟೋಡಿ
ಈ ಪರಿ ದಿನ ದಿನ ಮೂರುತಿ ನೋಡಿ
ಶ್ರೀಪತಿ ಪುರಂದರ ವಿಠಲನ ಪಾಡಿ ||೩||
0 ಕಾಮೆಂಟ್ಗಳು