|| ನಾರಾಯಣ ಆರತಿ ಹಾಡು ||
ಆನಂದಮಯಗೆ ಚಿನ್ಮಯಗೆ
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ ||ಪ||
ವೇದವ ತಂದು ಬೆಟ್ಟವ ಪೊತ್ತು ಧರಣಿಯ
ಸಾಧಿಸಿ ಕಂಬದಿ ಬಂದವಗೆ
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿಮೂರುತಿಗೆ ಆರತಿ ಎತ್ತಿರೆ ||೧||
ಇಂದುವದನೆ ಸಹಿತ ಅರಣ್ಯದೊಳಗಾಡಿ
ನಂದಗೋಕುಲದಲ್ಲಿ ನಲಿದವಗೆ
ಮಂದಗಮನೆಯರ ಮುಂದೆ ನಿರ್ಮಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ ||೨||
ತುರಗವನೇರಿ ದುಷ್ಟರ ಸೀಳಿ ಭಕ್ತರ
ಪೊರೆವ ಮಂಗಳ ಹಯವದನನಿಗೆ
ವರದ ಯಾದವಗಿರಿ ಚೆಲುವನಾರಾಯಣನ
ಚರಣಕಮಲಕೆ ಆರತಿ ಎತ್ತಿರೆ ||೩||
0 ಕಾಮೆಂಟ್‌ಗಳು