|| ದುರ್ಗಾ ಭಜನೆ ||
ಜಯದೇವಿ ಜಯದೇವಿ ಜಯ ಪಾವನಗಂಗೇ |
ಜಯಜಯ ತ್ರಿಪಥಗಾಮಿನಿ ಜಯ ತುಂಗತರಂಗೇ||ಪ||
ಆದಿಲಿ ಶ್ರೀಹರಿ ಕೋಮಲ ಪದನಖದಿಂದೊಗದು |
ಸಾಧಿನಿ ವಾರಿಜಭವನಾ ಕರಪಾತ್ರಕೆ ಬಂದು |
ಸಾದರದಿಂದಾಶಿವನ ಕೆಂಜೆಡೆಯೊಳು ನಿಂದು |
ಮೇದಿನಿಗಿಳಿದು ನೀಬಂದೆ ಭಗೀರಥನೃಪಗೊಲಿದು ||1||
ಕಾಶಿಪ್ರಯಾಗದಿ ನಿಂದು ಉದ್ದರಿಸುತ ಕೆಲರಾ |
ಆಶೆಯ ಪೂರಿಸಲಾಗಿ ದಕ್ಷಿಣ ದಿಶೆದವರಾ |
ರಾಶಿಯ ಕನ್ಯಾ ಮೆಟ್ಟಲು ಸುರಗುರು ಗಂಭೀರಾ |
ಭಾಶಿಶಿ ತೋರಿದೆ ಬಂದು ಕೃಷ್ಣವೇಣಿಲಿ ಸದರಾ ||2||
ಹರಿಹರ ದೇವರು ದ್ರವರೂಪದಿ ಹರಿವುತಲೀ |
ನೆರೆನೀಕೂಡಿದ ಸಂಭ್ರಮ ಏನೆಂದುಸುರಲಿ |
ದರುಶನ ಮಾತ್ರದಲಾದೆನು ಮುಕ್ತನು ಭವದಲಿ |
ಗುರು ಮಹೀಪತಿಸುತ ಎನ್ನನು ರಕ್ಷಿಸು ಕರುಣದಲಿ ||3||
0 ಕಾಮೆಂಟ್‌ಗಳು