ಶ್ರೀ ರಂಗನರಗಿಣಿ ಕೋಮಲಾಂಗಿ - Sri Ranganaragini Komalangi

|| ಲಕ್ಷ್ಮಿ ಹಾಡು ||



ಶ್ರೀ ರಂಗನರಗಿಣಿ ಕೋಮಲಾಂಗಿ

ಶ್ರೀ ವೆಂಕಟನ ಪಟ್ಟದರಸಿ

ಕೋಮಲೆ ರಮಾದೇವಿಯ ನೋಡಬನ್ನಿರೇ|

ಕಮಲಾರಿ ಸಹೋದರಿಯನೀಗ ಬೇಡಬನ್ನಿರೇ ॥ಪ॥


ಇಂದುನಿಭದ ಸುಂದರಿಯರು ಬಂದು ನೋಡಿರೇ|

ಈ ಕುಂದರದನೆ ಮಂದರೋದ್ಧರನರ್ಧಾಂಗಿಯ ನೋಡಬನ್ನಿರೇ॥೧॥


ಭಕ್ತಿಯಿಂದ ಭಜಿಪರಿಗೆ ಮುಕ್ತಿ ಕೊಡುವಳೇ

ಶಕ್ತಿ ಯುಕ್ತಿಗಳನೆ ಕೊಟ್ಟು ಆರತಿ ಮಾಳ್ಪಲೇ ॥೨॥


ದಾಸರಾದರೆ ಶ್ರೀಶನ ರಾಣಿ ಪೋಷಿಸುವಳೇ

ಗೋಪಾಲವಿಠಲ ಘಾಸಿಮಾಡದೆ ಪೋಷಿಸೆನುವಳೇ||೩||


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು