|| ಲಾಲಿ ಹಾಡು ||
ಜೋ ಜೋ ಜೋ ಜೋ ಜೋ ರಂಗಧಾಮ
ಜೋ ಜೋ ಜೋ ಜೋ ಜೋ ರಣಭೀಮ ||ಪ ||
ಜೋ ಜೋ ಭಕ್ತರ ಕಷ್ಟನಿರ್ಧೂಮಜೋ
ಜೋ ದಶರಥ ರಾಮ ನಿಸ್ಸೀಮ||ಅ .ಪ||
ಭೂಮಿಯ ಚಿನ್ನದ ತೊಟ್ಟಿಲ ಮಾಡಿ
ಸೋಮಸೂರ್ಯರೆಂಬ ಕಲಶವ ಹೂಡಿ
ನೇಮದಿ ವೇದಗಳ ಸರಪಣಿ ಮಾಡಿ
ಆ ಮಹಾಕಾಶಕ್ಕೆ ಕೊಂಡಿಗಳ ಹಾಕಿ||1||
ಸರಸಿಜೋದ್ಭವ ಸರಸ್ವತಿ ಭಾರತಿ
ಗರುಡಶೇಷ ರುದ್ರರಿವರ ಸತಿಯರು
ಸುರರ ಕಿನ್ನರರು ಕಿಂಪುರುಷ ನಾರದರು
ಪರಿಪರಿ ಗೀತದಿ ತುತಿಸಿ ಪಾಡಿದರು ||2||
ವಸುದೇವ ಸುತನಾದ ಮುದ್ದು ಮುರಾರಿ
ಅಸುರೆ ಪೂತನಿಯ ಪ್ರಾಣಾಪಹಾರಿ
ಅಸಮ ಸಾಹಸಮಲ್ಲ ದೈತ್ಯರ ವೈರಿ
ಶಿಶುವಾಗಿ ದೇವಕೀಗಾನಂದ ತೋರಿ ||3||
ಜಗವನು ಹೊಟ್ಟೆಯೊಳಿಂಬಿಟ್ಟೆ ತ್ರುವ್ವಿ
ಜಗವೆಲ್ಲ ನಿರ್ಮಾಣ ಮಾಡಿದೆ ತ್ರುವ್ವಿ
ನಿಗಮಗೋಚರ ನಿತ್ಯಾನಂದನೆ ತ್ರುವ್ವಿ
ಮಗುವೆಂದು ನಾವ್ ತೂಗಬಲ್ಲೆವೆ ತ್ರುವ್ವಿ||4||
ತಮನ ಮರ್ದಿಸಿ ವೇದತತಿಗಳನು ತಂದೆ
ಸುಮನಸರಿಗಾಗಿ ಮಂದರ ಪೊತ್ತು
ನಿಂದೆಕ್ಷಮೆಗಾಗಿ ಪೋಗಿ ಹಿರಣ್ಯಕನ ಕೊಂದೆ
ನಮಿಸಿ ಕರೆದರೆ ಕಂಬದಿಂದ್ಹೊರಟು ಬಂದೆ ||5||
ತರಳನಾಗಿ ಬಲಿಯ ದಾನವ ಬೇಡ್ದೆ
ಪರಶು ಧರಿಸಿ ಕ್ಷತ್ರಿಯರ ಸವರಿದೆದುರುಳ
ರಾವಣನ ಶಿರವ ಚೆಂಡಾಡಿದೆಚರಿಸಿ
ಮನೆಗಳ ಪಾಲ ಮೊಸರನ್ನು ಕುಡಿದೆ ||6||
ಬುದ್ಧನಾಗಿ ಪತಿವ್ರತೆರನಾಳಿದೆಯಲ್ಲ
ಮುದ್ದು ತುರಗವನೇರಿ ಕಲ್ಕ್ಯನಾದ್ಯಲ್ಲ
ಪದ್ಮನಾಭ ಸರಿ ಭಕ್ತವತ್ಸಲ ನಿದ್ರೆಯ
ಮಾಡಯ್ಯ ಶ್ರೀ ರಂಗವಿಠಲ ||7||
0 ಕಾಮೆಂಟ್ಗಳು