|| ಹರಿ ಭಜನೆ ||
ಆರು ಬಲ್ಲರು ಹರಿಹರಾದಿಗಳ ಮಹಿಮೆಯನು
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ||ಪ||
ಪೌರತ್ರಯವ ಗೆಲ್ವ ಸಮಯದಲಿ ತಪ ಮಾಡಿ
ನಾರಾಯಣಾಸ್ತ್ರವನು ಆರು ಬಲ್ಲರು
ಗೌರೀಮನೋಹರನ ಘನತರಾರ್ಚನೆಗೈದು
ಚಾರುತರ ಚಕ್ರವನು ಪಡೆದನಾ ಶೌರಿ ||೧||
ಬಲಿ ಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ
ಗಿಲ ಕಾಯ್ದನಚ್ಯುತನು ಅನುಗಾಲದಿ
ಬಲು ಭುಜನು ಬಾಣಾಸುರನ ಗೃಹ ದ್ವಾರವನು
ಬಳಸಿ ಕಾಯ್ದನು ಹರನು ವರವ ತಾನಿತ್ತು ||೨||
ಭೋಗಿಶಯನನು ಆಗಿ ಭೋಗಿಭೂಷಣನಾಗಿ
ವಾಗೀಶನಾಗಿ ಸೃಷ್ಟಿ ಸ್ಥಿತಿಲಯ
ಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ
ಕಾಗಿನೆಲೆಯಾದಿ ಕೇಶವನ ಮಹಿಮೆಯನು ||೩||
0 ಕಾಮೆಂಟ್‌ಗಳು