|| ಶ್ರೀರಾಮ ಸ್ತುತಿ ||
ಜಯತು ಕೋದಂಡರಾಮ ಜಯತು ದಶರಥರಾಮ
ಜಯತು ಸೀತಾರಾಮ ಜಯತು ರಘುರಾಮ||ಪ||
ತಮದೈತ್ಯನನು ಮಡುಹಿ ಮಂದರಾಚಲ ನೆಗಹಿ
ಪ್ರೀತಿಯಿಂದಲಿ ತಂದು ಸಕಲ ಭೂತಳವ
ಕೇತ್ರದಿಂದುದ್ಧವಿಸಿ ಮೂರೆಯಿಡುವ ಬಾಲಕನ
ಭೀತಿಯನು ಬಿಡಿಸಿ ನೆರೆಕಾಯ್ದ ರಘುರಾಮ ॥೧॥
ಬಲಿಯೊಳ್ ದಾನವ ಬೇಡಿ ನೆಲವ ಮೂರಡಿ ಮಾಡಿ
ಛಲದಿಂದ ಕ್ಷತ್ರಿಯರ ಕುಲವ ಹೋರಾಡಿ
ಲಲನೆಗೋಸುಗ ಬಂದ ನೆವದಿಂದ ರಾವಣನ
ತಲೆಗಳನು ಚೆಂಡಾಡಿ ಮೆರೆದ ರಘುರಾಮ||೨||
ವಸುದೇವಸುತನೆನಿಸಿ ವನಿತೆಯರ ವ್ರತಗೆಡಿಸಿ
ಎಸೆವ ತುರಗವನೇರಿ ಮಲ್ಲರನು ಸವರಿ
ವಸುಧೆಯೊಳು ಪುರಂದರವಿಠಲ ನೀ ಪಾಲಿಸೆ
ಬಿಸಜಾಕ್ಷಯೋಧ್ಯಪುರವಾಸ ರಘುರಾಮ ॥೩॥
0 ಕಾಮೆಂಟ್‌ಗಳು